ಪುತ್ತೂರು: ವಾಹನ ಚಾಲನೆಗೆ ಅಡ್ಡಿಯಾಗುವಂತೆ ಗಾಜುಗಳಿಗೆ ಸ್ಟಿಕ್ಕರ್ ಅಳವಡಿಸುವುದು ಹಾಗೂ ವಾಹನದ ನೋಂದಣಿ ಸಂಖ್ಯೆ ಮರೆಮಾಚುವ ರೀತಿಯಲ್ಲಿ ಸ್ಟಿಕ್ಕರ್ ಹಾಕಿಕೊಂಡು ಸಂಚರಿಸುತ್ತಿದ್ದ ವಾಹನಗಳ ವಿರುದ್ಧ ಪುತ್ತೂರು ಸಂಚಾರ ಠಾಣೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳಿಗೆ ಪೊಲೀಸರು ದಂಡ ವಿಧಿಸಿದ್ದಾರೆ.ಉತ್ಸವ, ಹಬ್ಬ-ಹರಿದಿನಗಳು ಅಥವಾ ಯಾವುದೇ ಕಾರ್ಯಕ್ರಮದ ನೆಪದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ವಾಹನ ಚಲಾಯಿಸಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.ಸಾರ್ವಜನಿಕರು ಸಂಚಾರ ನಿಯಮಗಳನ್ನು ಪಾಲಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!