ಪುತ್ತೂರು: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2020ರಲ್ಲಿ ನಡೆದ ಆಸಿಡ್ ದಾಳಿ ಪ್ರಕರಣದ ಆರೋಪಿಗೆ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹3 ಲಕ್ಷ ದಂಡ ವಿಧಿಸಿದೆ.ಕಡಬ ಪೊಲೀಸ್ ಠಾಣೆಯ ಅ.ಕ್ರ. 06/2020ರ ಪ್ರಕರಣದಲ್ಲಿ ಕಡಬ ಕೊಡಿಯಂಬಳ ನಿವಾಸಿ ಜಯಾನಂದ ಕೆ. (60) ಆರೋಪಿಯಾಗಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಆಗಿನ ಪುತ್ತೂರು ಮಹಿಳಾ ಠಾಣಾ ಪೊಲೀಸ್ ನಿರೀಕ್ಷಕ ಕುಸುಮಧರ ಅವರು ಸೂಕ್ತ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.ಪ್ರಕರಣದ ವಿಚಾರಣೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಗಳೂರು (ಪೀಠಾಸೀನ ಪುತ್ತೂರು)ದಲ್ಲಿ ನಡೆದಿದ್ದು, ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಅವರು ಆರೋಪಿಗೆ ಶಿಕ್ಷೆ ಪ್ರಕಟಿಸಿದ್ದಾರೆ.ಭಾರತೀಯ ದಂಡ ಸಂಹಿತೆ (IPC) ಕಲಂ 326A ಅಡಿಯಲ್ಲಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹3 ಲಕ್ಷ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ 2 ವರ್ಷಗಳ ಸರಳ ಕಾರಾಗೃಹ ಶಿಕ್ಷೆ ಅನುಭವಿಸಬೇಕು.ಇದೇ ವೇಳೆ ಕಲಂ 504ರ ಅಡಿಯಲ್ಲಿ 1 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹5,000 ದಂಡ ವಿಧಿಸಲಾಗಿದ್ದು, ದಂಡ ಪಾವತಿಸಲು ವಿಫಲವಾದಲ್ಲಿ 3 ತಿಂಗಳ ಸರಳ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.ಸರ್ಕಾರಿ ಅಭಿಯೋಜಕರಾದ ಕೃಷ್ಣವೇಣಿ, ಹರಿಶ್ಚಂದ್ರ ಉದ್ಯಾವರ್, ಪ್ರಕಾಶ್ ಚಂದ್ರ ಶೆಟ್ಟಿ ಹಾಗೂ ಜಯಂತಿ ಕೆ. ಅವರು ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!