ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್‌ ಮನೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಘಟನೆ ಬುಧವಾರ ಬೆಳಗ್ಗೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ.ಪುತ್ತೂರಿನಿಂದ ಕುಂಬ್ರದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಬೆಳಗ್ಗೆ ಸುಮಾರು 8 ಗಂಟೆಗೆ ದರ್ಬೆ ವೃತ್ತವನ್ನು ದಾಟಿ ಫಿಲೋಮಿನಾ ಕಾಲೇಜು ಸಮೀಪ ತಲುಪುತ್ತಿದ್ದಂತೆ ಬ್ರೇಕ್ ವೈಫಲ್ಯಗೊಂಡು ನಿಯಂತ್ರಣ ತಪ್ಪಿದೆ ಎನ್ನಲಾಗಿದೆ.ಬಸ್‌ ರಸ್ತೆ ಬದಿಯಿಂದ ಸುಮಾರು 50 ಅಡಿ ದೂರ ಸಾಗಿ ಮನೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.ಅಪಘಾತದಲ್ಲಿ ಯಾವುದೇ ಗಾಯ-ಹಾನಿ ಸಂಭವಿಸಿಲ್ಲ. ಬಸ್ಸಿನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಇರಲಿಲ್ಲ ಎನ್ನಲಾಗಿದೆ. ಅಪಘಾತದ ಬಳಿಕ ಕ್ರೇನ್‌ ಸಹಾಯದಿಂದ ಬಸ್ಸನ್ನು ತೆರವುಗೊಳಿಸಲಾಯಿತು.

Leave a Reply

Your email address will not be published. Required fields are marked *

Join WhatsApp Group
error: Content is protected !!