ಪುತ್ತೂರು: ಆ.31ರಂದು ಪುತ್ತೂರಿನಲ್ಲಿ ಪ್ರತಿಭಟನಾ ಸಭೆ ನಡೆಸಲು ಒಂದು ಸಂಘಟನೆ ಅನುಮತಿ ಕೋರಿ ಆ.27ರಂದು ಬೆಳಗ್ಗೆ ಅರ್ಜಿ ಸಲ್ಲಿಸಿದೆ. ಆದರೆ ಅರ್ಜಿಯಲ್ಲಿ ಉಲ್ಲೇಖಿಸಿರುವ ಪ್ರತಿಭಟನಾ ಸ್ಥಳವು ಸರ್ಕಾರದ ಮಾರ್ಗಸೂಚಿಗಳಿಗೆ ಅನುಗುಣವಾಗಿಲ್ಲದ ಹಿನ್ನೆಲೆಯಲ್ಲಿ, ಸೂಕ್ತ ಸ್ಥಳವನ್ನು ಗುರುತಿಸಿ ಮರು ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚಿಸಲಾಗಿದೆ.ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ತಿಳಿಸಿ, ಸಂಬಂಧಿತ ಮಾರ್ಗಸೂಚಿಯ ಪ್ರತಿಯನ್ನೂ ಅರ್ಜಿದಾರರಿಗೆ ನೀಡಲಾಗಿದೆ ಎಂದು ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.ಇದೇ ವೇಳೆ, ಮತ್ತೊಂದು ಸಂಘಟನೆ ಆ.31ರಂದು ಪುತ್ತೂರಿನಲ್ಲಿ ಕಾರ್ಯಕ್ರಮ ಆಯೋಜಿಸಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹರಿದಾಡುತ್ತಿದೆ. ಆದರೆ ಈ ಸಂಘಟನೆಯು ಕಾರ್ಯಕ್ರಮಕ್ಕೆ ಅನುಮತಿ ಕೋರಿ ಯಾವುದೇ ಅರ್ಜಿ ಸಲ್ಲಿಸಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.ಸದ್ರಿ ಸಂಘಟನೆಯು ಅನುಮತಿಗಾಗಿ ಅರ್ಜಿ ಸಲ್ಲಿಸಿದಲ್ಲಿ, ಬೇರೊಂದು ದಿನಾಂಕವನ್ನು ನಿಗದಿಪಡಿಸಿ ಕಾರ್ಯಕ್ರಮ ನಡೆಸಲು ಅನುಮತಿ ಪಡೆಯುವಂತೆ ಸೂಚಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.ಸಾರ್ವಜನಿಕರು ಪ್ರತಿಭಟನೆ ಸೇರಿದಂತೆ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮುನ್ನ, ಕಾರ್ಯಕ್ರಮ ಆಯೋಜಕರು ಸಂಬಂಧಿಸಿದ ಇಲಾಖೆಯಿಂದ ಅಗತ್ಯ ಅನುಮತಿ ಪಡೆದಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!