ಮಂಗಳೂರು: ಸುಮಾರು 8 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ (LPC) ವಾರಂಟ್ ಆರೋಪಿತನನ್ನು ಮಂಗಳೂರು ಪೂರ್ವ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಬಂಧಿತನನ್ನು ಮುವಾಚ್ (45) ಎಂದು ಗುರುತಿಸಲಾಗಿದ್ದು, ಹಿಲೇರಿ ನಗರ, ಮುಕ್ಕಚೇರಿ, ಉಳ್ಳಾಲ, ಮಂಗಳೂರು ನಿವಾಸಿಯಾಗಿದ್ದಾನೆ. ಸದ್ಯ ಕೇರಳ ರಾಜ್ಯದ ಇರಿಕ್ಕೂರು ಪೆರುವಳತ್ ಪರಂಬುವಿನಲ್ಲಿ ವಾಸವಾಗಿದ್ದನು.ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೊ.ನಂ.166/2006, ಕಲಂ 379 ಐಪಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತನು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಲಯವು ಆತನ ವಿರುದ್ಧ ಎಲ್‌ಪಿಸಿ ವಾರೆಂಟ್ ಹೊರಡಿಸಿತ್ತು.ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಆ.28ರಂದು ಆರೋಪಿತನನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!