ವೇಣೂರು: 13 ವರ್ಷಗಳಿಂದ ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿಯನ್ನು ವೇಣೂರು ಠಾಣಾ ಪೊಲೀಸರು ವಿಜಯನಗರ ಜಿಲ್ಲೆಯ ಹರಪನಹಳ್ಳಿ ಕೊರಚರಟ್ಟಿಯಿಂದ ದಸ್ತಗಿರಿ ಮಾಡಿದ್ದಾರೆ.ವೇಣೂರು ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 16/2012, ಕಲಂ 395 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಶ್ರೀನಿವಾಸ್ ಕೆ. @ ಶಿನಪ್ಪ @ ಶೀನ (43) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.ವೇಣೂರು ಠಾಣೆಯ ಎಎಸ್‌ಐ ಬೆನ್ನಿಚನ್, ಹೆಡ್‌ಕಾನ್‌ಸ್ಟೆಬಲ್ ಕೃಷ್ಣ, ಪೊಲೀಸ್ ಕಾನ್‌ಸ್ಟೆಬಲ್ ಬಸವರಾಜ್ ಎಸ್.ಪಿ. ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಮೋಹನ್ ಕುಮಾರ್ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.ನಂತರ ಆರೋಪಿಯನ್ನು ಮಾನ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ.












