ಧರ್ಮಸ್ಥಳ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಈ ವಿಷಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ ಆರೋಪದಡಿ ಪ್ರಕರಣ ದಾಖಲಾಗಿದ್ದ ಯುವಕನನ್ನು ಧರ್ಮಸ್ಥಳ ಪೊಲೀಸರು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಂಧಿಸಿದ್ದಾರೆ.ಆಂಧ್ರಪ್ರದೇಶದ ಜಂಗಲ್ಪಲ್ಲಿ ನಿವಾಸಿ ಶ್ರೀಕಾಂತ್ (21) ಬಂಧಿತ ಆರೋಪಿ. 2025ರ ಸೆಪ್ಟೆಂಬರ್‌ನಿಂದ ನವೆಂಬರ್‌ ಅವಧಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಬಾಲಕಿ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಕುರಿತು ಆ.23ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ. 60/2026, ಕಲಂ 64(2)(m), 65(1), 351(2) ಬಿಎನ್‌ಎಸ್ ಹಾಗೂ ಕಲಂ 4(2), 6 ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಲು ಯತ್ನಿಸಿದ್ದ ಆರೋಪಿಯನ್ನು ಧರ್ಮಸ್ಥಳ ಠಾಣೆಯ ಪಿಎಸ್‌ಐ ಸಮರ್ಥ್ ಆರ್. ಗಾಣಿಗೇರ ನೇತೃತ್ವದ ತಂಡ, ಸಿಬ್ಬಂದಿಗಳಾದ ಎಚ್‌ಸಿ 418 ವೃಷಭ, ಎಚ್‌ಸಿ 369 ಮಹೇಶ್ ಹಾಗೂ ಸಿಪಿಸಿ 975 ಚರಣ್ ರಾಜ್ ಅವರ ಸಹಕಾರದೊಂದಿಗೆ ಆ.25ರಂದು ದೊಡ್ಡಬಳ್ಳಾಪುರದಲ್ಲಿ ಬಂಧಿಸಿದೆ.ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!