ಕಡಬ: ಮನೆಯಲ್ಲಿ ಮರದ ಬಾಕ್ಸ್‌ನಲ್ಲಿ ಸಂಗ್ರಹಿಸಿಟ್ಟಿದ್ದ ₹84,800 ನಗದನ್ನು ಕಳ್ಳತನ ಮಾಡಿರುವ ಘಟನೆ ಕಡಬ ಅಡ್ಡಗದ್ದೆಯಲ್ಲಿ ನಡೆದಿದೆ.ಕಡಬ ಗ್ರಾಮದ ನಿವಾಸಿ ತಮನ್ನಾ ಜಬೀನ್ (43) ಅವರು ಗಂಡ, ಮಕ್ಕಳು ಹಾಗೂ ಕುಟುಂಬದ ಸದಸ್ಯರೊಂದಿಗೆ ಅಡ್ಡಗದ್ದೆಯಲ್ಲಿರುವ ಮನೆಯಲ್ಲಿ ವಾಸವಾಗಿದ್ದಾರೆ. ಅವರು ತಮ್ಮ ಕೋಣೆಯಲ್ಲಿದ್ದ ಮರದ ಬಾಕ್ಸ್‌ನಲ್ಲಿ ಹಣ ಸಂಗ್ರಹಿಸಿಟ್ಟಿದ್ದರು.ಆ.18ರಂದು ಕಾರ್ಯಕ್ರಮವೊಂದರ ನಿಮಿತ್ತ ಗಂಡ ಹಾಗೂ ಮಕ್ಕಳೊಂದಿಗೆ ಉಡುಪಿಗೆ ತೆರಳಿದ್ದ ಅವರು ಅದೇ ದಿನ ಮನೆಗೆ ಹಿಂದಿರುಗಿದ್ದರು. ಆ.24ರಂದು ಬಾಕ್ಸ್‌ನಲ್ಲಿದ್ದ ಹಣ ತೆಗೆಯಲು ಹೋದಾಗ ಮರದ ಬಾಕ್ಸ್ ಒಡೆದ ಸ್ಥಿತಿಯಲ್ಲಿ ಕಂಡುಬಂದಿದೆ. ಪರಿಶೀಲಿಸಿದಾಗ ಅದರಲ್ಲಿದ್ದ ₹84,800 ನಗದು ಕಳವಾಗಿರುವುದು ಬೆಳಕಿಗೆ ಬಂದಿದೆ.ಈ ಕುರಿತು ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 101/2026, ಕಲಂ 305 ಬಿಎನ್‌ಎಸ್-2023ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.












