ಪುತ್ತೂರು: ಪುತ್ತೂರಿನಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಆ.31ರಂದು ನಡೆಯಲಿರುವ ‘ಪುತ್ತೂರು ಚಲೋ’ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಬಿಜೆಪಿ ಸಿದ್ಧತೆ ನಡೆಸಿದೆ.ಈ ಹಿನ್ನೆಲೆಯಲ್ಲಿ ಪುತ್ತೂರು ಬಿಜೆಪಿ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಎರಡು ಮಂಡಲಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲೆಯ ಪ್ರಮುಖರು, ಮಂಡಲದ ಪ್ರಮುಖರು ಮತ್ತು ಪುತ್ತೂರು ಬಿಜೆಪಿಯ ವಿವಿಧ ಹಂತದ ಪದಾಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಚರ್ಚಿಸಿದರು.ಅನ್ಯಾಯ, ಅಕ್ರಮ, ದೌರ್ಜನ್ಯ ಹಾಗೂ ಅಧಿಕಾರದ ದುರುಪಯೋಗದ ವಿರುದ್ಧ ಪುತ್ತೂರಿನ ಜನರ ಧ್ವನಿಯಾಗಿ ಬಿಜೆಪಿ ಹೋರಾಟ ನಡೆಸಲಿದೆ. ಜನರ ಹಕ್ಕು, ಶಾಂತಿ ಮತ್ತು ನ್ಯಾಯಕ್ಕಾಗಿ ಯಾವುದೇ ಒತ್ತಡಕ್ಕೂ ಮಣಿಯದೆ ಹೋರಾಟ ಮುಂದುವರಿಸುವ ಸಂಕಲ್ಪವನ್ನು ಸಭೆಯಲ್ಲಿ ವ್ಯಕ್ತಪಡಿಸಲಾಯಿತು.ಆ.31ರಂದು ಸೋಮವಾರ ಬೆಳಿಗ್ಗೆ 10.30ಕ್ಕೆ ದರ್ಬೆ ವೃತ್ತದಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ‘ಪುತ್ತೂರು ಚಲೋ’ ನಡೆಯಲಿದೆ.ನ್ಯಾಯಕ್ಕಾಗಿ ಹಾಗೂ ಪುತ್ತೂರಿನ ಹಿತಕ್ಕಾಗಿ ನಡೆಯುವ ಹೋರಾಟದಲ್ಲಿ ಪುತ್ತೂರಿನ ಸಮಸ್ತ ನಾಗರಿಕರು ಮತ್ತು ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ‘ಪುತ್ತೂರು ಚಲೋ’ವನ್ನು ಯಶಸ್ವಿಗೊಳಿಸುವಂತೆ ಬಿಜೆಪಿ ಮನವಿ ಮಾಡಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!