ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕ, ನಿವೃತ್ತ ತಹಶೀಲ್ದಾರ್, ಶತಾಯುಷಿ ಬಿ.ಎಸ್. ಕುಲಾಲ್ ಅವರು ಆ.30ರಂದು ನಿಧನರಾದರು.
ಕಂದಾಯ ಇಲಾಖೆಯಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಅವರು, ಬಳಿಕ ಸಹಕಾರ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷರಾಗಿ ಹಾಗೂ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಅವರು, ಸಾರ್ವಜನಿಕ ಹಾಗೂ ಸಹಕಾರ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ್ದರು.
ಅಂತಿಮ ದರ್ಶನಕ್ಕೆ ಅವಕಾಶ
ಬಿ.ಎಸ್. ಕುಲಾಲ್ ಅವರ ಅಂತಿಮ ಸಾರ್ವಜನಿಕ ದರ್ಶನಕ್ಕೆ ಆ.30ರಂದು ಮಧ್ಯಾಹ್ನ 2.30ರಿಂದ ಪುತ್ತೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಆವರಣದಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಂತ್ಯಕ್ರಿಯೆಗೂ ಮುನ್ನ ಸಾರ್ವಜನಿಕರು ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಬಹುದಾಗಿದೆ ಎಂದು ಸಂಘದ ಅಧ್ಯಕ್ಷ ಭಾಸ್ಕರ್ ಪೆರುವಾಯಿ ತಿಳಿಸಿದ್ದಾರೆ.
ಬಿ.ಎಸ್. ಕುಲಾಲ್ ಅವರ ಅಂತ್ಯಕ್ರಿಯೆ ಆ.30ರಂದು ಸಂಜೆ ಪುತ್ತೂರು ಸ್ಮಶಾನದಲ್ಲಿ ನಡೆಯಲಿದೆ.
ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆ, ಅಳಿಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!