ಪುತ್ತೂರು: ತಿಂಗಳಾಡಿ–ಓಲೆಮುಂಡೋವು ರಸ್ತೆಯ ಅಂಙತ್ತಡ್ಕ ಹಾಗೂ ಕನ್ನಡಮೂಲೆ ಸಮೀಪ ರಸ್ತೆ ಸಂಪೂರ್ಣ ಹೊಂಡಗುಂಡಿಗಳಿಂದ ಕೂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ.ಪುತ್ತೂರಿನ ಹಲವು ಶಾಲೆಗಳ ಬಸ್‌ಗಳು ಸಂಚರಿಸುವ ಈ ರಸ್ತೆ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ. ಧಾರ್ಮಿಕ ಕ್ಷೇತ್ರಗಳಿಗೂ ಸಂಪರ್ಕ ಹೊಂದಿರುವ ರಸ್ತೆಯ ಆರಂಭದಿಂದ ಕನ್ನಡಮೂಲೆವರೆಗೆ ಹಲವೆಡೆ ಬೃಹತ್‌ ಹೊಂಡಗಳು ನಿರ್ಮಾಣವಾಗಿದ್ದು, ಸಂಚಾರ ದುಸ್ತರವಾಗಿದೆ.ಕಳೆದ ಹಲವು ವರ್ಷಗಳಿಂದ ರಸ್ತೆ ಹದಗೆಟ್ಟಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ದುರಸ್ತಿಗೆ ಮುಂದಾಗಿಲ್ಲ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ. ಪ್ರತಿದಿನ ನೂರಾರು ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಹೊಂಡಗಳಿಂದಾಗಿ ಅಪಘಾತದ ಆತಂಕ ಎದುರಾಗಿದೆ. ಅದರಲ್ಲೂ ದ್ವಿಚಕ್ರ ವಾಹನ ಸವಾರರು ಹಾಗೂ ರಾತ್ರಿ ವೇಳೆ ಸಂಚರಿಸುವವರು ಹೆಚ್ಚಿನ ಸಮಸ್ಯೆ ಅನುಭವಿಸುತ್ತಿದ್ದಾರೆ.ರಸ್ತೆಯ ಹೊಂಡಗಳನ್ನು ಶೀಘ್ರ ಮುಚ್ಚಿ, ರಸ್ತೆ ದುರಸ್ತಿ ಕಾಮಗಾರಿ ಕೈಗೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!