ಬೆಳ್ತಂಗಡಿ: ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ)ಯಲ್ಲಿ ಕಳೆದ ಒಂದು ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ವಿನೋದ್ ರೆಡ್ಡಿ ಅವರನ್ನು ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಆ.31ರಂದು ಅಮಾನತುಗೊಳಿಸಲಾಗಿದೆ.ವಿನೋದ್ ರೆಡ್ಡಿ ಅವರು ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್‌ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಮುಂಡಗೋಡ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದರು. ಆದರೆ ವಿಶೇಷ ತನಿಖಾ ದಳ ರಚನೆಯಾದ ಬಳಿಕ ಬೆಳ್ತಂಗಡಿಯ ಎಸ್‌ಐಟಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.ಪೊಲೀಸ್ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಡೀಲಿಂಗ್ ಹಾಗೂ ತಿಂಗಳ ಮಾಮೂಲಿ ಕುರಿತು ಮಾತನಾಡಿರುವ ಆಡಿಯೋವೊಂದು ವೈರಲ್ ಆದ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ ನಡೆಸಲಾಗಿದೆ.ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರು ಪಿಎಸ್‌ಐಗಳಾದ ಕಿರಣ್ ಪಾಟೀಲ್, ಕೃಷ್ಣಾ ಅರಿಕೆರೆ ಹಾಗೂ ವಿನೋದ್ ರೆಡ್ಡಿ ಅವರನ್ನು ಆ.31ರಂದು ಅಮಾನತುಗೊಳಿಸಿ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!