ಪುತ್ತೂರು: ದರ್ಬೆ ಘಟನೆಯನ್ನು ತಿರುಚಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ಸಂಘರ್ಷಕ್ಕೆ ಪ್ರಚೋದನೆ ನೀಡಲು ಬಿಜೆಪಿ,ಪರಿವಾರ ಸಂಘಟನೆಗಳು ಷಡ್ಯಂತ್ರ ನಡೆಸುತ್ತಿವೆ ಎಂದು ಆರೋಪಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಂದು (ಸೆ.2) ಪ್ರತಿಭಟನೆ ನಡೆಯಲಿದೆ.ಪುತ್ತೂರಿನ ಗಾಂಧಿ ಕಟ್ಟೆಯಲ್ಲಿ ಸಂಜೆ 4 ಗಂಟೆಗೆ ಪ್ರತಿಭಟನೆ ಆಯೋಜಿಸಲಾಗಿದೆ.ಘಟನೆಯ ನೈಜ ದೃಶ್ಯಾವಳಿಗಳು ಲಭ್ಯವಿದ್ದರೂ ಸುಳ್ಳು ಸುದ್ದಿ ಹರಡಿ ಗಲಭೆ ಸೃಷ್ಟಿಸುವ ಹುನ್ನಾರ ನಡೆಸಲಾಗುತ್ತಿದೆ ಎಂದು SDPI ಆರೋಪಿಸಿದೆ. ಅಲ್ಲದೆ,ಸಂಘಟನೆ ಯ ಹಾಗೂ ಬಿಜೆಪಿ ನಾಯಕರ ಪ್ರಚೋದನಕಾರಿ ಹೇಳಿಕೆಗಳು ಮತ್ತು ‘ಪುತ್ತೂರು ಚಲೋ’ ಕಾರ್ಯಕ್ರಮದಲ್ಲಿ ವಿವಾದಾತ್ಮಕ ಘೋಷಣೆಗಳನ್ನು ಕೂಗಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆ ತಿಳಿಸಿದೆ.ಕೋಮುವಾದದ ವಿರುದ್ಧ ಧ್ವನಿ ಎತ್ತುವಂತೆ SDPI ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಸಂಘಟನೆ ಕರೆ ನೀಡಿದೆ.












