ಪುತ್ತೂರು: ಪುತ್ತೂರಿನ ದರ್ಬೆಯಲ್ಲಿ ಮಗುವಿನ ಜನನ ಪ್ರಮಾಣಪತ್ರವನ್ನು ಲ್ಯಾಮಿನೇಷನ್ ಮಾಡುವ ವೇಳೆ ದಾಖಲೆ ಸುಟ್ಟು ಹಾನಿಯಾಗಿರುವ ವಿಚಾರಕ್ಕೆ ಸಂಬಂಧಿಸಿ ನಡೆದ ಗಲಾಟೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಸುಳ್ಯ ಸಮೀಪದ ಮಂಡೆಕೋಲು ನಿವಾಸಿಗಳಾದ ಮುಬಾರೀಶ್, ಮುಬಾಶಿರ್ ಹಾಗೂ ಮಿಸ್ಬಾನ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.ಅಂಜನಾ ಪೈ ಅವರು ನೀಡಿದ ದೂರಿನ ಆಧಾರದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಸೆ.2ರಂದು ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.ಆರೋಪಿಗಳ ಪರವಾಗಿ ನ್ಯಾಯವಾದಿ ರಶೀದ್ ಗೂನಡ್ಕ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.













