ಪುತ್ತೂರು: ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪುತ್ತೂರು ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ಸೆ.5ರಂದು ನಡೆಯಲಿದೆ.ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ. ಖಾದರ್ ಫರೀದ್ ಅವರ ಅಧ್ಯಕ್ಷತೆಯಲ್ಲಿ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿದೆ.ಸೆ.5ರಂದು ಬೆಳಗ್ಗೆ 11 ಗಂಟೆಯಿಂದ ಪುತ್ತೂರು ಪುರಭವನದಲ್ಲಿ ಸಭೆ ನಡೆಯಲಿದೆ.ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸುವಂತೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಪುತ್ತೂರು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!