ಸುಳ್ಯ: ದೇವಚಳ್ಳ ಗ್ರಾಮ ಆಡಳಿತಾಧಿಕಾರಿ ಕಚೇರಿಯಲ್ಲಿ ಗ್ರಾಮ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೀಪಕ್ (38) ಆತ್ಮಹತ್ಯೆ ಮಾಡಿಕೊಂಡ ಘಟನೆ ಎಡಮಂಗಲ ಗ್ರಾಮದ ಪುಳಿಕುಕ್ಕುನಲ್ಲಿ ನಡೆದಿದೆ.ದೀಪಕ್ ಅವರು ಪುಳಿಕುಕ್ಕುನಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರ ಸಹೋದರ ದಿವಾಕರ್ ಬೆಳ್ಳಾರೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಮೃತರು ಪತ್ನಿ, ಮಗು ಹಾಗೂ ಸಹೋದರರನ್ನು ಅಗಲಿದ್ದಾರೆ.













