ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಲು ಹೊಸ ಕಾನೂನು ಜಾರಿಗೆ ತರಲು ನಿರ್ಧರಿಸಲಾಗಿದ್ದು, ಅಲ್ಲದೆ ಇದಕ್ಕೆ ಟಾಸ್ಕ್ ಫೋರ್ಸ್ ರಚನೆ ಕೂಡ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಮತ್ತು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡ್ರಗ್ಸ್​ ಹಾವಳಿ ತಡೆಗಟ್ಟಲು ಟಾಸ್ಕ್ ಫೋರ್ಸ್ ರಚಿಸಲು ತೀರ್ಮಾನಿಸಿದ್ದೇವೆ. ಗೃಹ ಸಚಿವರು, ಆರೋಗ್ಯ, ವೈದ್ಯಕೀಯ, ನಗರಾಭಿವೃದ್ಧಿ, ಐಟಿಬಿಟಿ ಇಲಾಖೆ ಸಚಿವರುಗಳು‌ ಈ ಟಾಸ್ಕ್​ ಫೋರ್ಸ್​​ನ ಸದಸ್ಯರಾಗಿರುತ್ತಾರೆ ಎಂದು ಹೇಳಿದರು.

ಇನ್ನೂ ಡ್ರಗ್ಸ್​ ತಡೆಗಟ್ಟಲು ಕಾನೂನಿನಲ್ಲಿ ತಿದ್ದುಪಡಿ ಅಥವಾ ಹೊಸ ಕಾನೂನು ಮಾಡುತ್ತೇವೆ. ಡ್ರಗ್ಸ್​ ಕೇಸ್​ನಲ್ಲಿ ಬಂಧನಕ್ಕೊಳಗಾದರೆ ಜಾಮೀನು ಸಿಗದಂತೆ ಮಾಡುತ್ತೇವೆ. ಡ್ರಗ್ಸ್​ ಸೇವನೆ ಮತ್ತು ಮಾರಾಟ ಮಾಡುವವರಿಗೆ ಕನಿಷ್ಠ 10 ವರ್ಷ ಜೈಲು‌ ಶಿಕ್ಷೆ ಆಗಲಿದೆ.ಡ್ರಗ್ಸ್​ ಸೇವನೆಯಿಂದ ಯುವ ಸಮೂಹ ಹಾಳಾಗುತ್ತಿದ್ದು, ಇದು ಸಮಾಜಕ್ಕೆ ಕಂಟಕ. ಡ್ರಗ್ಸ್ ತಡೆಗಟ್ಟಲು ಎನ್​ಜಿಒಗಳನ್ನು ಬಳಕೆ ಮಾಡಿಕೊಳ್ಳುತ್ತೇವೆ. ಡ್ರಗ್ಸ್ ತಡೆಗಟ್ಟಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ.

ಡ್ರಗ್ಸ್ ಹಾವಳಿಯಿಂದ ಅಪರಾಧ ಪ್ರಕರಣ ಕೂಡ ಹೆಚ್ಚಾಗುತ್ತಿದೆ. ನಶೆಯಲ್ಲಿ ಚಾಕು ಇರಿತದಿಂದ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಡ್ರಗ್ಸ್ ಹಾವಳಿ ನಿಯಂತ್ರಿಸಲು ಟಾಸ್ಕ್​ಫೋರ್ಸ್​ ರಚನೆ ಮಾಡಲು ನಿರ್ಧರಿಸಿದ್ದೇವೆ. NCC, ಸ್ಕೌಡ್ಸ್ ಆಯಂಡ್​ ಗೈಡ್ಸ್​ ವಿದ್ಯಾರ್ಥಿಗಳಿಗೆ ಇದರ ಬಗ್ಗೆ ಜಾಗೃತಿ ಮೂಡಿಸಿ, ಡ್ರಗ್ಸ್​ ತಡೆಗಟ್ಟುವಲ್ಲಿ ಅವರು ಭಾಗಿಯಾಗುವಂತೆ ಮಾಡುತ್ತೇವೆ ಎಂದರು.

ಮೆಡಿಕಲ್‌ ಶಾಪ್​​ಗಳಲ್ಲೂ ಡ್ರಗ್ಸ್ ಸಿಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈಗಾಗಲೇ ಕೆಲ ಮೆಡಿಕಲ್ ಶಾಪ್​​ಗಳ ಲೈಸೆನ್ಸ್ ರದ್ದು ಮಾಡಿದ್ದೇವೆ. ಡ್ರಗ್ಸ್ ಇಲ್ಲ ಅಂತ ಹೇಳಲ್ಲ, ಕಡಿಮೆ ಮಾಡಬೇಕು ನಂತರ ತಡೆಗಟ್ಟಬೇಕು. 2023ರಲ್ಲಿ 123 ಅಂತರಾಷ್ಟ್ರೀಯ ಡ್ರಗ್ಸ್​ ಸರಬರಾಜುದಾರರನ್ನು ಬಂಧಿಸಲಾಗಿದೆ. 2024ರಲ್ಲಿ 8,018 ಡ್ರಗ್ಸ್ ಸೇವನೆ ಮಾಡುವವರನ್ನು ಬಂಧಿಸಲಾಗಿದೆ ಎಂದರು.

Leave a Reply

Your email address will not be published. Required fields are marked *

Join WhatsApp Group
error: Content is protected !!