ವಿಟ್ಲ: ಠಾಣಾ ವ್ಯಾಪ್ತಿಯ ನಿವಾಸಿ ಸಂತ್ರಸ್ತ ಬಾಲಕನ ದೂರಿನ ಮೇರೆಗೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಆರು ಪ್ರಕರಣಗಳು ದಾಖಲಾಗಿದ್ದು, ಆರೋಪಿಗಳ ಪೈಕಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.2026ರ ಫೆಬ್ರವರಿಯಿಂದ ಆಗಸ್ಟ್‌ವರೆಗೆ ಜವಾದ್, ಶಹೀದ್, ರಿಯಾಝ್ ಅಲಿಯಾಸ್ ಅಬ್ದುಲ್ ಗಫೂರ್ ಸೇರಿದಂತೆ ಇತರ ಮೂವರು ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಸೆ.4ರಂದು ದೂರು ನೀಡಲಾಗಿತ್ತು.ದೂರಿನ ಆಧಾರದ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 185/2026ರಿಂದ 190/2026ರವರೆಗೆ ಒಟ್ಟು ಆರು ಪ್ರಕರಣಗಳು ದಾಖಲಾಗಿದ್ದು, ಪೋಕ್ಸೋ ಕಾಯ್ದೆ 2012ರ ಕಲಂ 4(2), 5(m), 6 ಹಾಗೂ 8ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳಾದ ಜವಾದ್, ಶಹೀದ್ ಹಾಗೂ ರಿಯಾಝ್ ಅಲಿಯಾಸ್ ಅಬ್ದುಲ್ ಗಫೂರ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!