ಮಂಗಳೂರು: ಪ್ರಕರಣವೊಂದರಲ್ಲಿ ಕಳೆದ 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ (ಲಾಂಗ್ ಪೆಂಡಿಂಗ್ ಕೇಸ್) ವಾರೆಂಟ್ ಆರೋಪಿತನನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.
ಬಂಧಿತನನ್ನು ಉಳ್ಳಾಲದ ಮುಕ್ಕಚೇರಿ ಕಿಲೇರಿಯಾ ನಗರದ ನಿವಾಸಿ ಅಶ್ವಾಕ್ (34) ಎಂದು ಗುರುತಿಸಲಾಗಿದೆ.
ಆರೋಪಿತನ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ಐಪಿಸಿ ಕಲಂ 143, 147, 341, 504, 323, 506, 307, 149ರಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವು 2ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಸಿಸಿ ನಂ. 5442/2018ರಂತೆ ವಿಚಾರಣೆಯಲ್ಲಿತ್ತು.
ಆರೋಪಿತನು ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯವು ಆತನ ವಿರುದ್ಧ ಎಲ್‌ಪಿಸಿ ವಾರೆಂಟ್ ಹೊರಡಿಸಿತ್ತು.
ದಿನಾಂಕ ಸೆಪ್ಟೆಂಬರ್ 8ರಂದು ಮಂಗಳೂರು ಉತ್ತರ ಠಾಣೆ ಪೊಲೀಸರು ಅಶ್ವಾಕ್‌ನನ್ನು ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.













