ಪುತ್ತೂರು: ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 10ರಂದು ಪುತ್ತೂರು ನಗರ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.
110/33/11 ಕೆ.ವಿ. ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ದರ್ಬೆ, ಪುತ್ತೂರು ಟೌನ್ ಓಲ್ಡ್ ಹಾಗೂ ವಾಟರ್ ಸಪ್ಲೈ ಫೀಡರ್‌ಗಳಲ್ಲಿ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.
ಇದರ ಪರಿಣಾಮ ವಾಟರ್ ಸಪ್ಲೈ, ದರ್ಬೆ, ಕೆಎಸ್‌ಆರ್‌ಟಿಸಿ, ನೆಲ್ಲಿಕಟ್ಟೆ, ಕಲ್ಲಾರೆ, ಸಾಮೆತ್ತಡ್ಕ, ಹನುಮಾನ್ ಮಿಲ್, ಅಶ್ವಿನಿ ಸರ್ಕಲ್, ಐಬಿ ಹಾಗೂ ಎಂ.ಟಿ. ರೋಡ್ ಪರಿಸರಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ತುರ್ತು ಕಾಮಗಾರಿಗೆ ಸಾರ್ವಜನಿಕರು ಹಾಗೂ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.













