ಪುತ್ತೂರು: ಕೆಲಸದ ನಿಮಿತ್ತ ಪುತ್ತೂರಿಗೆ ತೆರಳುತ್ತಿದ್ದ ಮಹಿಳೆಗೆ ಆಟೋ ರಿಕ್ಷಾದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸೆ.9ರಂದು ಬೆಳಗ್ಗೆ ಮಹಿಳೆ ಪರಿಚಯದ ಬಾಲಕೃಷ್ಣ ಎಂಬವರು ಚಾಲನೆ ಮಾಡುತ್ತಿದ್ದ KA 21 B 2011 ನೋಂದಣಿ ಸಂಖ್ಯೆಯ ಆಟೋ ರಿಕ್ಷಾದಲ್ಲಿ ಪುತ್ತೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ ಚಾಲಕ ಮಾರ್ಗ ಬದಲಿಸಿ ರಿಕ್ಷಾವನ್ನು ಕುರಿಯ ಎಂಬಲ್ಲಿಗೆ ಕೊಂಡೊಯ್ದು ನಿಲ್ಲಿಸಿ, ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.ಈ ಕುರಿತು ಮಹಿಳೆ ನೀಡಿದ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 117/2026, ಬಿಎನ್‌ಎಸ್ ಕಾಯ್ದೆಯ ಕಲಂ 74, 75 ಹಾಗೂ 64ರಡಿ ಪ್ರಕರಣ ದಾಖಲಾಗಿದೆ.ದೂರಿನ ಆಧಾರದ ಮೇಲೆ ಆರೋಪಿಯನ್ನು ಸಂಟ್ಯಾರ್–ಪರ್ಪುಂಜ ಬಳಿ ಪುತ್ತೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ. ವಿಚಾರಣೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ











