ಬೆಳ್ಳಾರೆ: ಸರ್ಕಾರಿ ವಿದ್ಯಾರ್ಥಿನಿಲಯಕ್ಕೆ ಅತಿಕ್ರಮ ಪ್ರವೇಶ ಮಾಡಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳನ್ನು ಕಳವು ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳು ಸೆ.2ರಂದು ಬೆಳಗ್ಗೆ ಕಾಣೆಯಾಗಿದ್ದವು. ಈ ಬಗ್ಗೆ ವಿದ್ಯಾರ್ಥಿನಿಯರು ನಿಲಯದ ಮೇಲ್ವಿಚಾರಕಿಗೆ ಮಾಹಿತಿ ನೀಡಿದ್ದರು. ಬಳಿಕ ಸಿಸಿ ಕ್ಯಾಮರಾ ಪರಿಶೀಲಿಸಿದಾಗ, ಮುಂಜಾನೆ ಅಪರಿಚಿತ ಯುವಕನೋರ್ವ ವಿದ್ಯಾರ್ಥಿನಿಲಯಕ್ಕೆ ಅತಿಕ್ರಮ ಪ್ರವೇಶಿಸಿ ಕೆಲವು ಬಟ್ಟೆಗಳನ್ನು ಕಳವು ಮಾಡಿಕೊಂಡು ಹೋಗುತ್ತಿರುವುದು ಕಂಡುಬಂದಿತ್ತು.ಈ ಕುರಿತು ಸೆ.5ರಂದು ನೀಡಿದ ದೂರಿನ ಮೇರೆಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 54/2026, ಬಿಎನ್‌ಎಸ್ ಕಾಯ್ದೆಯ ಕಲಂ 331(4), 305ರಡಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ನಡೆಸಿದ ಪೊಲೀಸರು ಪುತ್ತೂರು ಕೊಳ್ತಿಗೆ ನಿವಾಸಿ ಕೆ. ರಾಮಚಂದ್ರ (35) ಎಂಬಾತನನ್ನು ಸೆ.7ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ಸೆ.15ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!