ಪುತ್ತೂರು: ಪುತ್ತೂರಿನ ಚೇತನಾ ಆಸ್ಪತ್ರೆಯಲ್ಲಿ ಸೆ.11ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಉಚಿತ ಫೈಬ್ರೋಸ್ಕ್ಯಾನ್ ಶಿಬಿರ ಆಯೋಜಿಸಲಾಗಿದೆ.ಯಕೃತ್ತಿನ ಆರೋಗ್ಯದ ಬಗ್ಗೆ ಕಾಳಜಿ ಹೊಂದಿರುವವರು, ಫ್ಯಾಟಿ ಲಿವರ್ ಸಮಸ್ಯೆ ಇರುವವರು, ಮದ್ಯಪಾನ ಮಾಡುವವರು, ಅತಿಯಾದ ತೂಕ ಹೊಂದಿರುವವರು, ಮಧುಮೇಹ ಹಾಗೂ ಕೊಲೆಸ್ಟ್ರಾಲ್ ಸಮಸ್ಯೆ ಇರುವವರು ಮತ್ತು ಲಿವರ್‌ಗೆ ಸಂಬಂಧಿಸಿದ ಸಮಸ್ಯೆಗಳಿರುವವರು ಫೈಬ್ರೋಸ್ಕ್ಯಾನ್ ಪರೀಕ್ಷೆ ಮಾಡಿಸಿಕೊಳ್ಳುವುದು ಸೂಕ್ತವಾಗಿದೆ.ಫೈಬ್ರೋಸ್ಕ್ಯಾನ್ ಮೂಲಕ ಯಕೃತ್ತಿನಲ್ಲಿ ಕೊಬ್ಬಿನ ಪ್ರಮಾಣ ಹಾಗೂ ಲಿವರ್‌ನ ಗಟ್ಟಿತನ (ಫೈಬ್ರೋಸಿಸ್) ಕುರಿತು ತಪಾಸಣೆ ನಡೆಸಬಹುದಾಗಿದೆ. ಆರಂಭಿಕ ಹಂತದಲ್ಲೇ ಲಿವರ್ ಸಮಸ್ಯೆಗಳನ್ನು ಗುರುತಿಸಲು ಈ ಪರೀಕ್ಷೆ ಸಹಕಾರಿಯಾಗಲಿದೆ.ಆಸಕ್ತರು ಸೆ.11ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರೊಳಗೆ ಚೇತನಾ ಆಸ್ಪತ್ರೆಗೆ ಭೇಟಿ ನೀಡಿ ಉಚಿತ ಫೈಬ್ರೋಸ್ಕ್ಯಾನ್ ಪರೀಕ್ಷೆಯ ಸೌಲಭ್ಯ ಪಡೆದುಕೊಳ್ಳಬಹುದು. ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಆಸ್ಪತ್ರೆ ಪ್ರಕಟಣೆ ತಿಳಿಸಿದೆ

Leave a Reply

Your email address will not be published. Required fields are marked *

Join WhatsApp Group
error: Content is protected !!