ಪುತ್ತೂರು: ಬಂಟ್ವಾಳದ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದ 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿನಿ ಕ್ಲಿಯಾ ರಿನೇಲಾ ಪಿಂಟೋ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ), ದಕ್ಷಿಣ ಕನ್ನಡ ಮತ್ತು ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆಯ ಜಂಟಿ ಆಶ್ರಯದಲ್ಲಿ ಪಂದ್ಯಾಟ ನಡೆದಿತ್ತು.ಕ್ಲಿಯಾ ರಿನೇಲಾ ಅವರು ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಅಧ್ಯಾಪಕರಾದ ಕ್ಲಮೆಂಟ್ ಪಿಂಟೋ ಹಾಗೂ ರೇಷ್ಮಾ ರೆಬೆಲ್ಲೋ ದಂಪತಿಯ ಪುತ್ರಿ. ರಾಜ್ಯಮಟ್ಟದ ಕ್ರೀಡಾಕೂಟ ಅಕ್ಟೋಬರ್‌ನಲ್ಲಿ ರಾಮನಗರದಲ್ಲಿ ನಡೆಯಲಿದೆ.ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಸಂಚಾಲಕರು, ಆಡಳಿತ ಮಂಡಳಿ, ಮುಖ್ಯಶಿಕ್ಷಕರು, ಶಿಕ್ಷಕರು, ಪೋಷಕರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿ, ರಾಜ್ಯಮಟ್ಟದ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.











