ಪುತ್ತೂರು: ಕಳೆದ 50 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸೆ.12ರಂದು ಬೆಳಿಗ್ಗೆ 10.30ಕ್ಕೆ ಬೊಳುವಾರಿನ ವಿಶ್ವಕರ್ಮ ಸಭಾಭವನದಲ್ಲಿ ನಡೆಯಲಿದೆ.ಸಂಘವು ಸುಮಾರು 22 ವರ್ಷಗಳ ಹಿಂದೆ ₹87 ಲಕ್ಷ ನಷ್ಟದಿಂದ ಅತಂತ್ರ ಸ್ಥಿತಿಯಲ್ಲಿತ್ತು. ಸದಸ್ಯರ ಸಹಕಾರ, ಆಡಳಿತ ಮಂಡಳಿಯ ದಕ್ಷ ಹಾಗೂ ಪ್ರಾಮಾಣಿಕ ಆಡಳಿತ ಮತ್ತು ಸಿಬ್ಬಂದಿಯ ಪರಿಶ್ರಮದಿಂದ ನಷ್ಟವನ್ನು ಸಂಪೂರ್ಣವಾಗಿ ಸರಿದೂಗಿಸಿ ಸಂಘವು ಪ್ರಗತಿಯತ್ತ ಸಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ತಿಳಿಸಿದ್ದಾರೆ.2013-14ನೇ ಸಾಲಿನಲ್ಲಿ ಮೊದಲ ಬಾರಿಗೆ ಶೇ.3ರಷ್ಟು ಡಿವಿಡೆಂಡ್‌ ವಿತರಿಸಿದ್ದ ಸಂಘವು, 2025-26ನೇ ಸಾಲಿನಲ್ಲಿ ₹185.71 ಲಕ್ಷ ಲಾಭ ಗಳಿಸಿದ್ದು, ಶೇ.11ರಷ್ಟು ಡಿವಿಡೆಂಡ್‌ ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ.ಸಂಘದ ಸಾಧನೆಯನ್ನು ಪರಿಗಣಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ 2025-26ನೇ ಸಾಲಿನ ಮಹಾಸಭೆಯಲ್ಲಿ ಸತತ ಎಂಟನೇ ಬಾರಿಗೆ ‘ಅತ್ಯುತ್ತಮ ಸಾಧನಾ ಪ್ರಶಸ್ತಿ’ ನೀಡಿ ಗೌರವಿಸಿದೆ ಎಂದು ಈಶ್ವರ ಭಟ್ ತಿಳಿಸಿದ್ದಾರೆ.ಮಹಾಸಭೆಗೆ ಎಲ್ಲ ಸದಸ್ಯರು ಆಗಮಿಸಿ ಸಂಘದ ಅಭಿವೃದ್ಧಿಗೆ ಸೂಕ್ತ ಸಲಹೆ-ಸೂಚನೆಗಳನ್ನು ನೀಡುವಂತೆ ಅವರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!