ಪುತ್ತೂರು: ಆ.31ರಂದು ಪುತ್ತೂರಿನಲ್ಲಿ ನಡೆದ ‘ಪುತ್ತೂರು ಚಲೋ’ ಕಾರ್ಯಕ್ರಮದ ಮೆರವಣಿಗೆಯಲ್ಲಿ ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ವಿದ್ಯಾರ್ಥಿಯೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಆ.21ರಂದು ಪುತ್ತೂರಿನ ದರ್ಬೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ವತಿಯಿಂದ ಆ.31ರಂದು ‘ಪುತ್ತೂರು ಚಲೋ’ ಕಾರ್ಯಕ್ರಮ ಆಯೋಜಿಸಲಾಗಿತ್ತು.ದರ್ಬೆಯಿಂದ ವೆಂಕಟರಮಣ ದೇವಸ್ಥಾನದತ್ತ ಮೆರವಣಿಗೆ ಸಾಗುತ್ತಿದ್ದ ವೇಳೆ ಕೆಲವರು ಸ್ಥಳೀಯ ಮುಸ್ಲಿಂ ಸಮುದಾಯವನ್ನು ಪಾಕಿಸ್ತಾನ ಹಾಗೂ ಬಾಂಗ್ಲಾದೇಶಕ್ಕೆ ಹೋಲಿಸುವ ರೀತಿಯಲ್ಲಿ ಘೋಷಣೆಗಳನ್ನು ಕೂಗಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಈ ಕುರಿತ ವೀಡಿಯೊ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ವೀಕ್ಷಿಸಿದ ಬಳಿಕ ದೂರುದಾರರು ಪೊಲೀಸರಿಗೆ ದೂರು ನೀಡಿದ್ದಾರೆ.ಮೆರವಣಿಗೆಯಲ್ಲಿ ಭಾಗವಹಿಸಿದವರು ಎರಡು ಅಥವಾ ಹೆಚ್ಚು ಧರ್ಮಗಳ ನಡುವೆ ವೈಮನಸ್ಸು ಹಾಗೂ ದ್ವೇಷ ಉಂಟುಮಾಡುವ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತರುವ ರೀತಿಯಲ್ಲಿ ಘೋಷಣೆ ಕೂಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!