ಉಪ್ಪಿನಂಗಡಿ: ಮರದ ಮಿಲ್ಲಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ವಿದ್ಯುತ್‌ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ.ಬಂದಾರು ನಿವಾಸಿ ಲಿಂಗಪ್ಪ ಗೌಡ ಅವರ ಪುತ್ರ ಜಯಪ್ರಕಾಶ್ (30) ಮೃತರು. ಪದ್ಮುಂಜದಲ್ಲಿರುವ ಮರದ ಮಿಲ್ಲಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ವಿದ್ಯುತ್‌ ಆಘಾತಕ್ಕೊಳಗಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.ತಕ್ಷಣ ಸಹ ಕಾರ್ಮಿಕರು ಹಾಗೂ ಸ್ಥಳೀಯರು ಅವರನ್ನು ರಕ್ಷಿಸಿ ಬೆಳ್ತಂಗಡಿ ಆಸ್ಪತ್ರೆಗೆ ಕರೆದೊಯ್ದರಾದರೂ, ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.ಮೃತರು ಪತ್ನಿ ಹಾಗೂ ಎಳೆಯ ವಯಸ್ಸಿನ ಮಗುವನ್ನು ಅಗಲಿದ್ದಾರೆ. ಸಾವಿಗೆ ವಿದ್ಯುತ್‌ ಅವಘಡವೇ ಕಾರಣವೇ ಅಥವಾ ಬೇರೆ ಕಾರಣವಿದೆಯೇ ಎಂಬುದು ಮರಣೋತ್ತರ ಪರೀಕ್ಷೆಯ ಬಳಿಕ ಸ್ಪಷ್ಟವಾಗಲಿದೆ. ಶನಿವಾರ ಬೆಳಗ್ಗೆ ಮರಣೋತ್ತರ ಪರೀಕ್ಷೆ ನಡೆಸಲು ವೈದ್ಯಾಧಿಕಾರಿಗಳು ನಿರ್ಧರಿಸಿದ್ದಾರೆ.ಈ ಕುರಿತು ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!