ಬೆಂಗಳೂರು : ಕೇಂದ್ರ ಸರ್ಕಾರದವರೇ ಪ್ಯಾಲೆಸ್ತೀನ್‌ಗೆ ನಮ್ಮ ಬೆಂಬಲ ಇದೆ ಅಂತ ಹೇಳಿಕೆ ಕೊಟ್ಟಿದ್ದಾರೆ. ಹಾಗಾಗಿ ಧ್ವಜ (Palestine Flag) ತೋರಿಸುವುದರಲ್ಲಿ ತಪ್ಪೇನಿದೆ ಅಂತ ಬಂಧಿತರು ವಾದ ಮಾಡ್ತಾರೆ ಎಂದು ರಾಜ್ಯ ಗೃಹಸಚಿವ ಜಿ. ಪರಮೇಶ್ವರ್‌ ಹೇಳಿದ್ದಾರೆ.

ಪ್ಯಾಲೆಸ್ತೀನ್‌ ಧ್ವಜ ಪ್ರದರ್ಶಿಸಿದ ಪ್ರಕರಣದ ಕುರಿತು ಮಾತನಾಡಿದ ಅವರು, ಮೂರು ಜಿಲ್ಲೆಗಳಲ್ಲಿ ನಮಗೆ ಪ್ಯಾಲೆಸ್ತೀನ್‌ ಧ್ವಜ ಪ್ರದರ್ಶನ ಘಟನೆಗಳು ಕಂಡುಬಂದಿವೆ.

ಪ್ಯಾಲೆಸ್ತೀನ್‌ ಧ್ವಜ ಪ್ರದರ್ಶನ ಮಾಡಿದವರನ್ನೆಲ್ಲ ಬಂಧನ ಮಾಡಲಾಗಿದೆ. ಆದ್ರೆ ಕೇಂದ್ರ ಸರ್ಕಾರದವರೇ ಪ್ಯಾಲೆಸ್ತೀನ್‌ಗೆ (Palestine) ನಮ್ಮ ಬೆಂಬಲ ಇದೆ ಅಂತ ಹೇಳಿಕೆ ಕೊಟ್ಟಿದ್ದಾರೆ. ಹೀಗಿರುವಾಗ ಧ್ವಜ ತೋರಿಸುವುದರಲ್ಲಿ ತಪ್ಪೇನಿದೆ ಅಂತ ಅವ್ರು ವಾದ ಮಾಡ್ತಾರೆ. ಆದರೂ ಕೂಡ ನಾವು ಅವರನ್ನು ಬಂಧಿಸಿದ್ದೇವೆ ಎಂದು ಹೇಳಿದ್ದಾರೆ.

ಪ್ಯಾಲೆಸ್ತೀನ್‌ ಧ್ವಜ ಹಾರಿಸಲು ಯಾರು ಪ್ರಚೋದನೆ ಕೊಟ್ರು ಅಂತ ತನಿಖೆ ಮಾಡ್ತಿದ್ದೇವೆ. ಎಲ್ಲ ಚಿಕ್ಕ ಚಿಕ್ಕ ಹುಡುಗರಿಗೆ 17, 18 ವರ್ಷದ ಹುಡುಗರಿಗೆ ಪ್ರಚೋದನೆ ಕೊಟ್ಟಿದ್ದಾರೆ ಅಂತ ಮಾಹಿತಿ ಬಂಧ ಮೇಲೆ ಬಂಧಿಸಿದ್ದೇವೆ ಎಂದು ವಿವರಿಸಿದ್ದಾರೆ.

ಇದೇ ವೇಳೆ ನಾಗಮಂಗಲದಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪ ವಿಚಾರ ಕುರಿತು ಮಾತನಾಡಿ, ಇದರ ಬಗ್ಗೆ ನಮಗೆ ಮಾಹಿತಿ ಇಲ್ಲ. ಅಧಿಕಾರಿಗಳು ಪರಿಶೀಲನೆ ಮಾಡ್ತಾರೆ. ಬಿಜೆಪಿಯವರು ತಪ್ಪು ಮಾಹಿತಿ ಕೊಟ್ಟಿದ್ದಾರೆ ಎಂದು ನುಡಿದಿದ್ದಾರೆ.

ಇನ್ನೂ ನಾಗಮಂಗಲ ಗಲಭೆ (Nagamangala Violence) ವಿಚಾರ ಕುರಿತು ಮಾತನಾಡಿದ ಪರಮೇಶ್ವರ್‌, ನಾಗಮಂಗಲ ಪ್ರಕರಣವನ್ನೇ ದೊಡ್ಡ ವಿಷಯ ಮಾಡಲು ಬಿಜೆಪಿಯವ್ರು ಮಾತಾಡಿಕೊಂಡಿದ್ದಾರೆ. ನಾವು ಕಾನೂನು ಪ್ರಕಾರ ಮುಲಾಜಿಲ್ಲದೇ ಕ್ರಮ ತಗೋತಿದ್ದೀವಿ. ಆದ್ರೆ ಬಿಜೆಪಿಯವ್ರು ದಿನಕ್ಕೊಂದು ಹೇಳಿಕೆ ಕೊಡ್ತಿದ್ದಾರೆ. ಆರೀತಿ ದಿನಕ್ಕೊಬ್ಬರು ಒಂದೊಂದು ಹೇಳಿಕೆ ಕೊಡಬೇಕು ಅಂತ ಅವರು ಡಿಸೈನ್ ಮಾಡಿಕೊಂಡಿದ್ದಾರೆ ಎಂದು ಕಿಡಿ ಕಾರಿದ್ದಾರೆ

Leave a Reply

Your email address will not be published. Required fields are marked *

Join WhatsApp Group
error: Content is protected !!