ಪುತ್ತೂರು: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪುತ್ತೂರು ಮತ್ತು ದರ್ಬೆ ಪಾಂಗ್ಳಾಯಿಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಸೆ.11ರಂದು ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ ನಡೆಯಿತು.ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ 14 ಹಾಗೂ 17ರ ವಯೋಮಾನದ ಬಾಲಕರ ಎರಡೂ ತಂಡಗಳು ಉತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿವೆ.ಶಾಲಾ ಪ್ರಾಂಶುಪಾಲೆ ಭಗಿನಿ ಅನಿತಾ ಟ್ರೆಸ್ಸಿ ಅವರ ನೇತೃತ್ವದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ನಿರಂಜನ್, ಅಕ್ಷಯ್ ಹಾಗೂ ಹರೀಶ್ ಅವರು ಕ್ರೀಡಾಪಟುಗಳಿಗೆ ತರಬೇತಿ ನೀಡಿದ್ದರು.ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ತಂಡದ ಕ್ರೀಡಾಪಟುಗಳಿಗೆ ಶಾಲಾ ಸಂಚಾಲಕರು, ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!