ಪುತ್ತೂರು: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪುತ್ತೂರು ಹಾಗೂ ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ನಡೆದ ತಾಲೂಕು ಮಟ್ಟದ 14 ಮತ್ತು 17 ವರ್ಷ ವಯೋಮಿತಿಯ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಜುವೆನ್ ಡ್ಯಾಸೆಲ್ ಕುಟಿನ್ಹಾ ಅವರು ‘ಬೆಸ್ಟ್ ರೈಡರ್’ ಪ್ರಶಸ್ತಿ ಪಡೆದುಕೊಂಡರು. ಜಾಣ್ಮೆಯ ಆಟ ಪ್ರದರ್ಶಿಸಿದ ಹಾರ್ದಿಕ ಪಿ. ಅವರು ‘ಬೆಸ್ಟ್ ಆಲ್‌ರೌಂಡರ್’ ವೈಯಕ್ತಿಕ ಪ್ರಶಸ್ತಿಗೆ ಭಾಜನರಾದರು.ಶಾಲಾ ಪ್ರಾಂಶುಪಾಲರಾದ ಭಗಿನಿ ಅನಿತಾ ಟ್ರೆಸ್ಸಿ ಅವರ ನಿರಂತರ ಮಾರ್ಗದರ್ಶನ ಹಾಗೂ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಅವರ ಅತ್ಯುತ್ತಮ ತರಬೇತಿ ತಂಡದ ಯಶಸ್ಸಿಗೆ ಪ್ರಮುಖ ಕಾರಣವಾಗಿದೆ.ತಂಡದ ಸಾಧನೆಗೆ ಬೆಥನಿ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ವೃಂದ, ರಕ್ಷಕ-ಶಿಕ್ಷಕ ಸಂಘದ (PTA) ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!