ಬಂಟ್ವಾಳ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.ಮಂಗಳೂರು ಬಜಾಲ್–ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ಬಂಧಿತ ಆರೋಪಿ.ಬಂಟ್ವಾಳ ನಗರ ಪೊಲೀಸ್ ಠಾಣೆಯ ಅ.ಕ್ರ. 24/2020ರಲ್ಲಿ ಐಪಿಸಿ ಕಲಂ 143, 147, 148, 504, 323, 324, 506, 427 r/w 149 ಹಾಗೂ Prevention of Destruction and Loss of Property Actನ ಕಲಂ 2(a)ರಡಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ಆರು ವರ್ಷಗಳಿಂದ ವಿದೇಶದಲ್ಲಿದ್ದ ನೌಫಲ್, ಸೆ.15ರಂದು ವಿದೇಶದಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ, ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ದಸ್ತಗಿರಿ ಮಾಡಿದ್ದಾರೆ.ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸೆ.29ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.











