ಪುತ್ತೂರು: ಮನೆಯ ಪಕ್ಕದ ಕೆರೆಯಲ್ಲಿ ಮಹಿಳೆಯೊಬ್ಬರ ಮೃತದೇಹ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸೆ.18ರಂದು ಶಿಶಿಲದ ಗುಂಡಿಕ್ಕಾಡು ಎಂಬಲ್ಲಿ ನಡೆದಿದೆ.ಗುಂಡಿಕ್ಕಾಡು ನಿವಾಸಿ ಚಿನ್ನಮ್ಮ (ಚಿತ್ರಾವತಿ) ಅವರ ಮೃತದೇಹ ಮನೆಯ ಪಕ್ಕದಲ್ಲಿರುವ ಕೆರೆಯಲ್ಲಿ ಪತ್ತೆಯಾಗಿದೆ.ಮೃತದೇಹ ಪತ್ತೆಯಾದ ಮಾಹಿತಿ ತಿಳಿದು ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಹಾಗೂ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಅಗತ್ಯ ಕಾರ್ಯಾಚರಣೆ ನಡೆಸಿದರು.ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಚಿನ್ನಮ್ಮ ಅವರ ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.











