ಮಂಗಳೂರು: ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಅವರು ಹೇಳಿದರು.











