ಉಪ್ಪಿನಂಗಡಿ: ವೈವಾಹಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತನ್ನ ಸುಮಾರು ಮೂರೂವರೆ ವರ್ಷದ ಮಗು ಹಾಗೂ ಪತಿಯ ತಂಗಿಯ ಸುಮಾರು ಮೂರು ವರ್ಷದ ಮಗುವನ್ನು ಬಾವಿಗೆ ಎಸೆದ ಘಟನೆ ಸೆ.19ರಂದು ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ಣೆಯಲ್ಲಿ ನಡೆದಿದೆ.ಪೆರ್ಣೆ ನಿವಾಸಿ ಸಿನಾನ್ (32) ಹಾಗೂ ನೂರುನ್ನಿಸಾ (28) ದಂಪತಿ ನಡುವೆ ಫೋನ್ ಕರೆಯಲ್ಲಿ ವೈವಾಹಿಕ ಕಲಹ ನಡೆದಿತ್ತು. ಈ ವೇಳೆ ಕೋಪಗೊಂಡ ನೂರುನ್ನಿಸಾ ಮನೆಯಲ್ಲಿದ್ದ ಎರಡೂ ಮಕ್ಕಳನ್ನು ಮನೆ ಸಮೀಪದ ಬಾವಿಗೆ ಎಸೆದಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.ಘಟನೆ ಗಮನಿಸಿದ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಮಕ್ಕಳನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಈ ಪೈಕಿ ನೂರುನ್ನಿಸಾ ಅವರ ಪತಿಯ ತಂಗಿಯ ಸುಮಾರು ಮೂರು ವರ್ಷದ ಮಗು ಮೃತಪಟ್ಟಿದೆ. ನೂರುನ್ನಿಸಾ ಅವರ ಮಗುವನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 121/2026ರಂತೆ ಪ್ರಕರಣ ದಾಖಲಾಗಿದ್ದು, ನೂರುನ್ನಿಸಾಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!