ಕಾರ್ಕಳ: ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ನಡೆದಿದೆ.ಕಾರ್ಕಳದಿಂದ ಮಂಗಳೂರಿನತ್ತ ತೆರಳುತ್ತಿದ್ದ ಖಾಸಗಿ ಬಸ್, ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.ಅಪಘಾತದಲ್ಲಿ ರಮಾನಾಥ ರೈ ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಕಾರು ಚಾಲಕ ಹಾಗೂ ಅವರ ಪಿಎ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.











