ಮಂಗಳೂರು: ವಂಚನೆ ಪ್ರಕರಣವೊಂದರಲ್ಲಿ ಅಮಾನತು ಮಾಡಲಾಗಿದ್ದ ಹಣವನ್ನು ಬಿಡುಗಡೆ ಮಾಡಲು ಲಂಚ ಪಡೆಯುತ್ತಿದ್ದ ಆರೋಪದ ಮೇರೆಗೆ ಬಜ್ಪೆ ಪೊಲೀಸ್‌ ಠಾಣೆಯ ಪೊಲೀಸ್‌ ನಿರೀಕ್ಷಕ ಬಾಲಕೃಷ್ಣ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಸಂಜೆ ದಾಳಿ ನಡೆಸಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.ಬಜ್ಪೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣವೊಂದರಲ್ಲಿ ಸಂತ್ರಸ್ತರ ಹಣವನ್ನು ಪೊಲೀಸರು ಅಮಾನತು ಮಾಡಿದ್ದರು ಎನ್ನಲಾಗಿದೆ. ಅಮಾನತು ಮಾಡಲಾಗಿದ್ದ ಹಣವನ್ನು ವಾಪಸ್‌ ಪಡೆಯಲು ಸಂತ್ರಸ್ತರು ಪೊಲೀಸ್‌ ನಿರೀಕ್ಷಕ ಬಾಲಕೃಷ್ಣ ಅವರನ್ನು ಸಂಪರ್ಕಿಸಿದಾಗ, ಪೂರ್ಣ ಹಣ ಬಿಡುಗಡೆ ಮಾಡಲು ₹25 ಸಾವಿರ ಲಂಚ ನೀಡುವಂತೆ ಕೇಳಿದ್ದರು ಎನ್ನಲಾಗಿದೆ.ಈ ಪೈಕಿ ₹15 ಸಾವಿರವನ್ನು ಮುಂಗಡವಾಗಿ ಪಡೆದಿದ್ದ ಬಾಲಕೃಷ್ಣ ಅವರು, ಉಳಿದ ₹10 ಸಾವಿರ ನೀಡುವಂತೆ ಸಂತ್ರಸ್ತರಿಗೆ ಒತ್ತಾಯಿಸುತ್ತಿದ್ದರು ಎನ್ನಲಾಗಿದೆ.ಸೋಮವಾರ ಉಳಿದ ಹಣದ ಪೈಕಿ ₹5 ಸಾವಿರ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಲಂಚದ ಹಣ ಸಹಿತ ಬಾಲಕೃಷ್ಣ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!