ಬೆಂಗಳೂರು: ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ 576 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.ಒಟ್ಟು 576 ಹುದ್ದೆಗಳ ಪೈಕಿ 560 ವಾರ್ಡರ್ ಹಾಗೂ 16 ದ್ವಿತೀಯ ದರ್ಜೆ ಬೋಧಕ ಸಿಬ್ಬಂದಿ ಹುದ್ದೆಗಳು ಸೇರಿವೆ. ಆಯ್ಕೆಯಾದವರಿಗೆ ತಿಂಗಳಿಗೆ ₹34,100ರಿಂದ ₹1,12,900ರವರೆಗೆ ವೇತನ ದೊರೆಯಲಿದೆ.ಅರ್ಜಿ ಸಲ್ಲಿಸಲು ಅರ್ಹತೆ:ಅಭ್ಯರ್ಥಿಗಳು ಕನಿಷ್ಠ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಬೋಧಕ ಸಿಬ್ಬಂದಿ ಹುದ್ದೆಗೆ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಕಾರ್ಪೆಂಟ್ರಿ, ಟೈಲರಿಂಗ್, ಜವಳಿ/ನೇಯ್ಗೆ, ಕಾರ್ಪೆಟ್ ತಯಾರಿಕೆ ಸೇರಿದಂತೆ ಸಂಬಂಧಿತ ವಿಭಾಗಗಳಲ್ಲಿ ಡಿಪ್ಲೊಮಾ ಅಥವಾ ಪ್ರಮಾಣಪತ್ರ ಹೊಂದಿರಬೇಕು.ವಯೋಮಿತಿ:ಅಭ್ಯರ್ಥಿಗಳ ವಯಸ್ಸು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 31 ವರ್ಷವಾಗಿರಬೇಕು. ನಿಯಮಾನುಸಾರ ವಿವಿಧ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.ಪ್ರಮುಖ ದಿನಾಂಕಗಳು:ಅರ್ಜಿ ಸಲ್ಲಿಕೆ ಆರಂಭ: ಸೆ.19, 2026ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅ.15, 2026ಶುಲ್ಕ ಪಾವತಿಗೆ ಕೊನೆಯ ದಿನಾಂಕ: ಅ.16, 2026ಸ್ಪರ್ಧಾತ್ಮಕ ಪರೀಕ್ಷೆ: ನ.21, 2026ಅರ್ಜಿ ಶುಲ್ಕ:ಸಾಮಾನ್ಯ, ಒಬಿಸಿ ಹಾಗೂ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ₹750 ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ₹500 ಶುಲ್ಕ ನಿಗದಿಪಡಿಸಲಾಗಿದೆ.ಆಯ್ಕೆ ಪ್ರಕ್ರಿಯೆ:ಲಿಖಿತ ಪರೀಕ್ಷೆ, ದೈಹಿಕ ಗುಣಮಟ್ಟ ಪರೀಕ್ಷೆ ಹಾಗೂ ಸಹಿಷ್ಣುತೆ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ತಪ್ಪು ಉತ್ತರಕ್ಕೆ 0.25 ಅಂಕಗಳ ಋಣಾತ್ಮಕ ಅಂಕನ ಇರಲಿದೆ. ಪರೀಕ್ಷೆಯು ನ.21ರಂದು ಮಧ್ಯಾಹ್ನ 3ರಿಂದ 4.30ರವರೆಗೆ ನಡೆಯಲಿದೆ.ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು https://cetonline.karnataka.gov.in/kea/pdrrpc2026 ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಹತೆ ಹಾಗೂ ಇತರ ನಿಯಮಗಳನ್ನು ಖಚಿತಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!