ವಿಟ್ಲ: ಕೇರಳ ಮೂಲದ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನೊಬ್ಬ ಅಪ್ರಾಪ್ತ ಬಾಲಕಿಯೊಂದಿಗೆ ಮೊಬೈಲ್ ಮೂಲಕ ಸಂಪರ್ಕದಲ್ಲಿದ್ದು, ಆಕೆಯನ್ನು ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.2025ರ ಡಿ.21ರಂದು ಬಾಲಕಿಯು ಆರೋಪಿತ ಬಾಲಕನ ಮನೆಗೆ ತೆರಳಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. 2026ರ ಸೆ.8ರಂದು ಬಾಲಕಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮನೆಯವರು ಆಸ್ಪತ್ರೆಗೆ ದಾಖಲಿಸಿದ್ದು, ಸೆ.9ರಂದು ಬಾಲಕಿಯು ಮಗುವಿಗೆ ಜನ್ಮ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಈ ಕುರಿತು ವಿಟ್ಲ ಠಾಣೆಯಲ್ಲಿ ಶೂನ್ಯ ಅ.ಕ್ರ. 01/2026ರಂತೆ ಪೋಕ್ಸೋ ಕಾಯ್ದೆಯ ಕಲಂ 4, 5(J)(ii), 5(L), 6 ಹಾಗೂ ಬಿಎನ್‌ಎಸ್‌ ಕಲಂ 64(2)(m)ರಡಿ ಪ್ರಕರಣ ದಾಖಲಾಗಿದೆ. ಘಟನೆ ನಡೆದ ಸ್ಥಳದ ಆಧಾರದ ಮೇಲೆ ಪ್ರಕರಣವನ್ನು ಸಂಬಂಧಿಸಿದ ಪೊಲೀಸ್ ಠಾಣೆಗೆ ವರ್ಗಾಯಿಸಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!