ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸುಮಾರು ₹50 ಲಕ್ಷ ವೆಚ್ಚದಲ್ಲಿ ನೂತನ ಆಧುನಿಕ ಶೌಚಾಲಯ ನಿರ್ಮಿಸಿಕೊಡಲು ಪ್ರತಿಷ್ಠಿತ ಎಸ್.ಜಿ. ಸಮೂಹ ಸಂಸ್ಥೆಯ ಬಿಂದು ಸಂಸ್ಥೆ ಮುಂದಾಗಿದೆ.ಈ ಹಿನ್ನೆಲೆಯಲ್ಲಿ ಸೆ.24ರಂದು ದೇವಸ್ಥಾನದಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ವಸಂತ ಕುಮಾರ್ ಕೆದಿಲಾಯರವರ ವೈದಿಕತ್ವದಲ್ಲಿ ಬಿಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕಿ ರಂಜಿತಾ ಶಂಕರ್ ಶಿಲಾನ್ಯಾಸ ನೆರವೇರಿಸಿದರು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಕಾರ್ಯನಿರ್ವಹಣಾಧಿಕಾರಿ ಕೆ.ವಿ. ಶ್ರೀನಿವಾಸ್, ಸದಸ್ಯರಾದ ನಳಿನಿ ಪಿ. ಶೆಟ್ಟಿ, ಈಶ್ವರ ಬೆಡೇಕರ್, ದಿನೇಶ್ ಪಿ.ವಿ., ಕೃಷ್ಣವೇಣಿ, ಸುಭಾಶ್ ರೈ ಬೆಳ್ಳಿಪ್ಪಾಡಿ, ಮಹಾಬಲ ರೈ ವಳತ್ತಡ್ಕ, ವಿನಯ ಸುವರ್ಣ, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಇಂಜಿನಿಯರ್ ಗಣೇಶ್ ಭಟ್, ಪಿ.ಜಿ. ಜಗನ್ನಿವಾಸ ರಾವ್, ಗೋಪಾಲಕೃಷ್ಣ ಪೂಜಾರಿ, ಲೋಕೇಶ್ ಪಡ್ಠಯೂರು, ರೋಹನ್ ರಾಜ್, ಸುದೇಶ್ ಚಿಕ್ಕಪುತ್ತೂರು, ಗುತ್ತಿಗೆದಾರ ರಕ್ಷಿತ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!