ಬೆಳ್ತಂಗಡಿ: ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂಕೋರ್ಟ್ ಸೂಚನೆಯಂತೆ ರಾಜ್ಯ ಸರಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಸೆ.24ರಂದು ಆದೇಶ ಹೊರಡಿಸಿದೆ.ಹೊಸದಾಗಿ ರಚಿಸಲಾಗಿರುವ ಎಸ್‌ಐಟಿ ತಂಡಕ್ಕೆ ಪೊಲೀಸ್ ಮಹಾ ನಿರೀಕ್ಷಕ (ಐಜಿಪಿ) ಎನ್. ಶಶಿಕುಮಾರ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.ತಂಡದ ಸದಸ್ಯರಾಗಿ ಮಂಗಳೂರು ಪೊಲೀಸ್ ಕಮಿಷನರ್ ಸಿ.ಎಚ್. ಸುಧೀರ್ ಕುಮಾರ್ ರೆಡ್ಡಿ, ರಾಜ್ಯ ಗುಪ್ತವಾರ್ತೆಯ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್ ಐಪಿಎಸ್, ಬೆಂಗಳೂರು ಸಿಐಡಿ ಪೊಲೀಸ್ ಅಧೀಕ್ಷಕ ಲೋಕೇಶ್ ಜಲಸಾಗರ್ ಐಪಿಎಸ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವೆಂಕಟೇಶ್ ಪ್ರಸನ್ನ ಅವರನ್ನು ನೇಮಿಸಿ ಸರಕಾರ ಆದೇಶಿಸಿದೆ.ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಯನ್ನು ಈ ಎಸ್‌ಐಟಿ ತಂಡ ಕೈಗೊಳ್ಳಲಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!