ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಹಾಗೂ ಅಭಿವೃದ್ಧಿ ಕಾಮಗಾರಿಗಳಲ್ಲಿನ ಆರೋಪಗಳ ಕುರಿತು ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಸೆ.29ರಂದು ಬೆಳಿಗ್ಗೆ 10ಕ್ಕೆ ಸಹಾಯಕ ಆಯುಕ್ತರ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ವಕ್ತಾರ ರಾಜೇಶ್ ಬನ್ನೂರು ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರ್ಮಿಕ ದತ್ತಿ ಇಲಾಖೆಯ ಅನುಮತಿ ಪಡೆಯದೆ ಕಾಮಗಾರಿ ನಡೆಸಿರುವುದು, ಅಗತ್ಯವಿಲ್ಲದ ವಸ್ತುಗಳನ್ನು ಏಲಂ ಮಾಡದೆ ವಿಲೇವಾರಿ ಮಾಡಿರುವುದು ಹಾಗೂ ವಿವಿಧ ಕಾಮಗಾರಿಗಳ ಹೆಸರಿನಲ್ಲಿ ಹಣ ವಿನಿಯೋಗಿಸಿರುವ ಆರೋಪಗಳ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಆಗ್ರಹಿಸಿದರು. ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳು ನಿಯಮಬದ್ಧ, ಪಾರದರ್ಶಕವಾಗಿ ನಡೆಯಬೇಕು ಎಂದರು
ಸುದ್ದಿಗೋಷ್ಠಿಯಲ್ಲಿ ವಿದ್ಯಾ ಗೌರಿ, ಸ್ವರ್ಣಲತಾ ಹಾಗೂ ಮಹೇಶ್ ಉಪಸ್ಥಿತರಿದ್ದರು











