ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29ರಂದು ವಿಶೇಷ ಹೃದಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.ಮಂಗಳವಾರ ಸಂಜೆ 3 ಗಂಟೆಯಿಂದ ನಡೆಯಲಿರುವ ಶಿಬಿರದಲ್ಲಿ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಲಾಗುತ್ತದೆ.ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಸ್ಥಳ: ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆ, ಸಂಪ್ಯ, ಪುತ್ತೂರುದಿನಾಂಕ: ಸೆ.29, ಮಂಗಳವಾರಸಮಯ: ಸಂಜೆ 3 ಗಂಟೆಯಿಂದ












