ಬಂಟ್ವಾಳ: ಸೆ.28ರಂದು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಿ.ಸಿ.ರೋಡ್ ಬಳಿ ನಡೆಯಲಿರುವ ಪ್ರತಿಭಟನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಕೈಗೊಂಡಿದೆ.ಪ್ರತಿಭಟನೆಯ ಹಿನ್ನೆಲೆಯಲ್ಲಿ ಸೆ.27ರಂದು ಬಿ.ಸಿ.ರೋಡ್ ಪರಿಸರದಲ್ಲಿ ಪೊಲೀಸರು ಪಥಸಂಚಲನ ನಡೆಸಿ ಭದ್ರತಾ ವ್ಯವಸ್ಥೆಯ ಕುರಿತು ಪರಿಶೀಲನೆ ನಡೆಸಿದರು.ಬಂದೋಬಸ್ತ್ ಕರ್ತವ್ಯಕ್ಕೆ ಒಟ್ಟು 1 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 1 ಸಹಾಯಕ ಪೊಲೀಸ್ ಅಧೀಕ್ಷಕರು, 8 ಪೊಲೀಸ್ ನಿರೀಕ್ಷಕರು, 23 ಪೊಲೀಸ್ ಉಪನಿರೀಕ್ಷಕರು, 34 ಸಹಾಯಕ ಪೊಲೀಸ್ ಉಪನಿರೀಕ್ಷಕರು, 184 ಪೊಲೀಸ್ ಸಿಬ್ಬಂದಿ ಹಾಗೂ 5 ಹೋಮ್‌ಗಾರ್ಡ್‌ಗಳನ್ನು ನಿಯೋಜಿಸಲಾಗಿದೆ.ಇದರೊಂದಿಗೆ 2 ಎಸ್‌ಎಎಫ್, 3 ಡಿಎಆರ್ ಹಾಗೂ 4 ಕೆಎಸ್‌ಆರ್‌ಪಿ ತುಕಡಿಗಳನ್ನು ಭದ್ರತಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.











