ಹವಾಮಾನ ಇಲಾಖೆಯಿಂದ ಕರ್ನಾಟಕ ಸೇರಿ ವಿವಿಧ ರಾಜ್ಯಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಿದೆ. ನಾಳೆಯ ದಿನ ಭಾರೀ ಮಳೆಯಾಗಲಿದ್ದು, ಮುಂಜಾಗೃತ ಕ್ರಮವಹಿಸಬೇಕು ಎಂದು ಸೂಚಿಸಿದೆ. ಸೆಪ್ಟೆಂಬರ್ 28 ರಂದು ಆಂಧ್ರ ಪ್ರದೇಶ, ಕರ್ನಾಟಕ, ತಮಿಳುನಾಡು, ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ ಹಾಗೂ ಮಹಾರಾಷ್ಟ್ರ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

ಇನ್ನು, ದೆಹಲಿಯಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹಿಮಾಚಲ ಪ್ರದೇಶದ ಶಿಮ್ಲಾ ಹವಾಮಾನ ಕೇಂದ್ರವು ಆ ಭಾಗದಲ್ಲಿ ಸೆಪ್ಟೆಂಬರ್ 29ವರೆಗೆ ನಿರಂತರವಾಗಿ ಮಳೆ ಬರುವ ಸಾಧ್ಯತೆ ಇದೆ. ನಂತರ ಮಳೆಯ ತೀವ್ರತೆ ಕೊಂಚ ಕಡಿಮೆ ಆಗಲಿದೆ. ಬೆಟ್ಟ, ತಗ್ಗು ಪ್ರದೇಶ ಹಾಗೂ ಬಯಲು ಪ್ರದೇಶಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಲಿದೆ. ಆದರೆ ಸೆಪ್ಟೆಂಬರ್ 28 ರಂದು ಮಾತ್ರ ರಾಜ್ಯದಲ್ಲಿ ಭಾರೀ ಮಳೆ ಆಗಲಿದೆ ಎಂದಿದೆ.ಪಶ್ಚಿಮ ಬಂಗಾಳ ಹವಾಮಾನಇಲ್ಲಿ ಸೆಪ್ಟೆಂಬರ್ 29 ರಿಂದ ಅಕ್ಟೋಬರ್ ಒಂದರವರೆಗೆ ನಿರಂತರವಾಗಿ ಮಳೆ ಸುರಿಯಲಿದೆ. ದಕ್ಷಿಣ ಬಂಗಾಳದಲ್ಲಿ ಮಳೆಯ ಚಟುವಟಿಕೆ ಕಡಿಮೆ ಇದೆ. ರಾಜ್ಯದ ವಿವಿಧ ಭಾಗಳಲ್ಲಿ ಮಳೆ ಬೀಳೋದ್ರಿಂದ ಅಲ್ಲಲ್ಲಿ ಮಳೆ ಸುರಿಯಲಿದೆ. ಇನ್ನು ಛತ್ತೀಸಗಢ ಹಾಗೂ ಮಧ್ಯಪ್ರದೇಶ ನಡುವೆ ಉಂಟಾಗಿದ್ದ ವಾಯಭಾರ ಕುಸಿತದಿಂದ ಪಶ್ಚಿಮ ಬಂಗಾಳ ಸೇಫ್ ಆಗಿದೆ ಎಂದು ಹಾವಮಾನ ಇಲಾಖೆ ಹೇಳಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!