ಬೆಂಗಳೂರು: ರಾಜ್ಯದಲ್ಲಿ ಪಾದಯಾತ್ರೆ ರಾಜಕೀಯಕ್ಕೆ ಕಾಂಗ್ರೆಸ್ ಚಾಲನೆ ನೀಡಲು ಮುಂದಾಗಿದೆ. ಬಿಜೆಪಿ ಸೋತಿರುವ 84 ವಿಧಾನಸಭಾ ಕ್ಷೇತ್ರಗಳಲ್ಲಿ 84 ದಿನಗಳ ಕಾಲ ಪಾದಯಾತ್ರೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದ್ದು, ಇದಕ್ಕೆ ‘ಭಾರತ್ ಜೋಡೋ 2.0’ ಎಂದು ಹೆಸರಿಡಲಾಗಿದೆ.ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2022ರ ಸೆಪ್ಟೆಂಬರ್ 7ರಂದು ಕನ್ಯಾಕುಮಾರಿಯಿಂದ ರಾಹುಲ್ ಗಾಂಧಿ ಆರಂಭಿಸಿದ್ದ ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 30ರಂದು ಕರ್ನಾಟಕದ ಗುಂಡ್ಲುಪೇಟೆ ಪ್ರವೇಶಿಸಿತ್ತು. ಅಕ್ಟೋಬರ್ 21ರವರೆಗೆ ರಾಜ್ಯದ 11 ಜಿಲ್ಲೆಗಳಲ್ಲಿ ಸುಮಾರು 600 ಕಿ.ಮೀ. ಪಾದಯಾತ್ರೆ ನಡೆಸಿ ಜನರ ಸಮಸ್ಯೆಗಳನ್ನು ಆಲಿಸಲಾಗಿತ್ತು ಎಂದು ವಿವರಿಸಿದರು.ಅದೇ ಯಾತ್ರೆಯ ನೆನಪಿನಲ್ಲಿ ಸೆ.30ರಿಂದ ರಾಜ್ಯದಲ್ಲಿ ‘ಭಾರತ್ ಜೋಡೋ 2.0’ ಆರಂಭಿಸಲಾಗುತ್ತಿದೆ. ರಾಹುಲ್ ಗಾಂಧಿ ಅವರ ಹಿಂದಿನ ಯಾತ್ರೆ ನಡೆದ 11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ 29 ಜಿಲ್ಲೆಗಳಲ್ಲಿ ಯಾತ್ರೆ ನಡೆಸಲಾಗುವುದು. ಮಧ್ಯಾಹ್ನ 1ರಿಂದ ಸಂಜೆವರೆಗೆ ಸಾರ್ವಜನಿಕ ಸಭೆಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಚಾಲನೆಸೆ.30ರಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನಿಂದ ಯಾತ್ರೆಗೆ ಚಾಲನೆ ನೀಡಲಾಗುವುದು. ಸಚಿವರಾದ ಮಧು ಬಂಗಾರಪ್ಪ, ರುದ್ರಪ್ಪ ಲಮಾಣಿ, ಜಮೀರ್ ಅಹ್ಮದ್ ಖಾನ್, ಬಿ.ಎಲ್. ಶಂಕರ್ ಸೇರಿದಂತೆ ಪ್ರಮುಖ ನಾಯಕರು ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಲಿದ್ದಾರೆ. ಅ.4–5ರಿಂದ ಉಳಿದ ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ಮುಂದುವರಿಯಲಿದೆ.ಶಿಕಾರಿಪುರದಿಂದಲೇ ಯಾತ್ರೆ ಆರಂಭಿಸುವ ಕುರಿತು ಮಾತನಾಡಿದ ಹರಿಪ್ರಸಾದ್, ಬಿಜೆಪಿ ರಾಜ್ಯಾಧ್ಯಕ್ಷರ ಕ್ಷೇತ್ರದಿಂದಲೇ ಯಾತ್ರೆ ಆರಂಭಿಸಿ ಬಿಜೆಪಿಯ ನ್ಯೂನತೆಗಳ ಬಗ್ಗೆ ಜನಜಾಗೃತಿ ಮೂಡಿಸಲಾಗುವುದು ಎಂದರು. ಅಲ್ಲದೆ, ಚುನಾವಣಾ ಆಯೋಗದಂತಹ ಸಂವಿಧಾನಿಕ ಸಂಸ್ಥೆಯ ಕುರಿತು ಬಿಜೆಪಿ ನಾಯಕರು ಮಾಡುತ್ತಿರುವ ಟೀಕೆಗಳ ಬಗ್ಗೆಯೂ ಜನರಲ್ಲಿ ಅರಿವು ಮೂಡಿಸಲಾಗುವುದು ಎಂದು ಹೇಳಿದರು.84 ಕ್ಷೇತ್ರಗಳಲ್ಲಿ 84 ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ ಎಂದು ಅವರು ಸ್ಪಷ್ಟಪಡಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾಜಿ ಎಂಎಲ್‌ಸಿ ನಾರಾಯಣಸ್ವಾಮಿ ಹಾಗೂ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!