ಬಂಟ್ವಾಳ: ನ್ಯಾಯಾಲಯದ ಪ್ರಕ್ರಿಯೆ ಹಾಗೂ ಪ್ರಕರಣವೊಂದರ ತನಿಖೆಗೆ ಸಂಬಂಧಿಸಿದಂತೆ ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿ ಮತ್ತು ಹೇಳಿಕೆಗಳನ್ನು ನೀಡಿ ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನಿಸಿದ್ದಾರೆ ಎಂಬ ಆರೋಪದಡಿ ವಕೀಲ ಪ್ರಸಾದ್ ಎಂಬವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.ಬಂಟ್ವಾಳ ಬಡಗಬೆಳ್ಳೂರು ನಿವಾಸಿ ಹನೀಫ್ @ ಮಹಮ್ಮದ್ ಹನೀಫ್ (43) ಅವರು ನೀಡಿದ ದೂರಿನಂತೆ, ಸೆ.28ರಂದು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಿ.ಸಿ.ರೋಡ್‌ನಲ್ಲಿ ಧಾರ್ಮಿಕ ಸಂಘಟನೆಯೊಂದರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ವಕೀಲ ಪ್ರಸಾದ್ ಭಾಷಣ ಮಾಡಿದ್ದರು.ಈ ವೇಳೆ ನ್ಯಾಯಾಲಯದ ಪ್ರಕ್ರಿಯೆ ಹಾಗೂ ಪ್ರಕರಣವೊಂದರ ತನಿಖೆಗೆ ಸಂಬಂಧಿಸಿದಂತೆ ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿ ಹಾಗೂ ಹೇಳಿಕೆಗಳನ್ನು ನೀಡಿ ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ದೂರರ್ಜಿ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.‘











