ಮಂಗಳೂರು: ಕಾವೂರು ಪೊಲೀಸರು ಕಾರ್ಯಾಚರಣೆ ನಡೆಸಿ 16 ಗ್ರಾಂ MDMA ಮಾದಕ ವಸ್ತುವನ್ನು ವಶಪಡಿಸಿಕೊಂಡು, ಓರ್ವನ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.ಸೆ.29ರಂದು ಮರಕಡ ಗ್ರಾಮದ ಬೊಂದೇಲ್‌ನಿಂದ ಮೂಡುಶೆಡ್ಡೆ ಕಡೆಗೆ ಸಾಗುವ ಡಾಮಾರು ರಸ್ತೆಯ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಮೊಹಮ್ಮದ್ ಇರ್ಫಾನ್ ಎ.ಕೆ. (26) ಎಂಬಾತನನ್ನು ಪೊಲೀಸರು ಪರಿಶೀಲಿಸಿದ್ದಾರೆ. ಈ ವೇಳೆ ಆತನ ವಶದಲ್ಲಿದ್ದ ಸುಮಾರು 16 ಗ್ರಾಂ MDMA ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದು, ಇದರ ಅಂದಾಜು ಮೌಲ್ಯ ₹1.60 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 128/2026, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.ಈತನ ವಿರುದ್ಧ ಈ ಹಿಂದೆ ದಾಖಲಾಗಿದ್ದ ಪ್ರಕರಣಗಳು:ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ರಾತ್ರಿ ಕಳ್ಳತನ ಪ್ರಕರಣ.ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ರಾತ್ರಿ ಕಳ್ಳತನ ಪ್ರಕರಣ.ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2024ರಲ್ಲಿ ಗಾಂಜಾ ಸೇವನೆ ಪ್ರಕರಣ.











