ಪುತ್ತೂರು: ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳು ಹಾಗೂ ವ್ಯವಸ್ಥೆಗಳನ್ನು ವೀಕ್ಷಿಸಿದರು.ಆಸ್ಪತ್ರೆಯ ಸೇವಾ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದುಕೊಂಡ ಅವರು, ಆಸ್ಪತ್ರೆಯ ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮೆಡ್‌ಲ್ಯಾಂಡ್ ಆಸ್ಪತ್ರೆಯ ಚೇರ್ಮನ್ ಡಾ. ಅಶ್ರಫ್ ಕಮ್ಮಾಡಿ ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಅಬ್ದುಲ್ ಮಜೀದ್ ಮೈಸೂರು ಅವರನ್ನು ಗೌರವಿಸಿದರು.ಎಸ್‌ಡಿಪಿಐ ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು, ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಬಾವು, ಪುತ್ತೂರು ನಗರ ಅಧ್ಯಕ್ಷ ತಾಜುದ್ದೀನ್ ಸಾಲ್ಮರ ಮತ್ತಿತರರು ಉಪಸ್ಥಿತರಿದ್ದರು.











