ವಿಟ್ಲ: ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಆರೋಪದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.ಅ.2ರಂದು ಮಧ್ಯಾಹ್ನ ಪೆರುವಾಯಿ ಗ್ರಾಮದ ಪೆರುವಾಯಿಯಲ್ಲಿ ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ಆಧರಿಸಿ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಕೋಳಿ ಅಂಕ ನಡೆಯುತ್ತಿರುವುದು ದೃಢಪಟ್ಟಿದೆ.ಈ ವೇಳೆ ಕೃಷಪ್ಪ (59), ಲಕ್ಷ್ಮಣ ನಾಯ್ಕ್ (38), ಶೋಬಿತ್ ರಾಜ್ (29) ಹಾಗೂ ಯುವರಾಜ್ (46) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿದ್ದ ಕೋಳಿಗಳು, ಕೋಳಿ ಅಂಕಕ್ಕೆ ಬಳಸಲಾಗುತ್ತಿದ್ದ ಕತ್ತಿಗಳು ಹಾಗೂ ₹3,050 ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 203/2026ರಂತೆ ಪ್ರಕರಣ ದಾಖಲಿಸಿಕೊಂಡು, ಕರ್ನಾಟಕ ಪೊಲೀಸ್ ಕಾಯ್ದೆ ಹಾಗೂ ಪ್ರಾಣಿ ಹಿಂಸೆ ತಡೆ ಕಾಯ್ದೆ ಸೇರಿದಂತೆ ಬಿಎನ್‌ಎಸ್‌ನ ಸಂಬಂಧಿತ ಕಲಂಗಳಡಿ ತನಿಖೆ ಮುಂದುವರಿಸಲಾಗಿದೆ

Leave a Reply

Your email address will not be published. Required fields are marked *

Join WhatsApp Group
error: Content is protected !!