ಸುಳ್ಯ: ಬಾಲಕಿಯ ಮೇಲೆ‌ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸೊ ಪ್ರಕರಣದಲ್ಲಿ ಜ್ಯೋತಿಷಿಯೊಬ್ಬರನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.

ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಬಂಧಿತ ಆರೋಪಿ.

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಡುವ ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಕಾಣಿಯೂರು ಸಮೀಪದ ಬೆಳಂದೂರು ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಕೌನ್ಸಿಲಿಂಗ್ ಸಂದರ್ಭ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು, ಬೆಳ್ಳಾರೆ ಪೊಲೀಸರು ಸೆ.19ರ ಬೆಳಗ್ಗಿನ ಜಾವ ಪ್ರಸಾದ್ ಪಂಗಣ್ಣಾಯನನ್ನು ಆತನ ಮನೆಯಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!